ರಾಜ್ಯ ರಾಜಧಾನಿ ಬೆಂಗಳೂರಿ (BANGALORE )ನಲ್ಲಿ ಮತ್ತೆ ಕೊರೊನಾ ರಣಕೇಕೆ ಆರಂಭವಾಗಿದ್ದು, 16 ದಿನಗಳ ಬಳಿಕ ಮತ್ತೆ ಕೊರೊನಾ (CORONA ) ಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇದೆ. ಆದರೆ ಸಾವಿನ ಸಂಖ್ಯೆ ಶೂನ್ಯ ಪ್ರಮಾಣದಲ್ಲಿತ್ತು. ಆದರೆ ಈಗ ಮತ್ತೆ ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ 72 ವರ್ಷದ ಮಹಿಳೆ ಬಲಿಯಾಗಿದ್ದಾರೆ.
ಬೆಂಗಳೂರಿನ ನಿವಾಸಿಯಾಗಿರುವ ಇವರು ಕೆಲ ದಿನಗಳಿಂದ ಜ್ವರ ಮತ್ತು ಕೆಮ್ಮು ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಾ ಇದ್ದರು. ಈ ಹಿನ್ನೆಲೆಯಲ್ಲಿ 72 ವರ್ಷದ ಮಹಿಳೆ ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಇದನ್ನು ಓದಿ :- CORONA – ಕೊರೊನಾದಿಂದ ಚೇತರಿಸಿಕೊಂಡವರಲ್ಲಿ ಕ್ಷಯ ರೋಗ ಪತ್ತೆ…!