ರಾಜ್ಯದಲ್ಲಿ ಒಂದು ದಿನದಲ್ಲಿ 1102 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 17 ಮಂದಿ ಅಸುನೀಗಿದ್ದಾರೆ. ಗಣೇಶ ಹಬ್ಬ ಹತ್ತಿರ ಬರುತ್ತಿದ್ದಂತೆ ಸೋಂಕು ಪ್ರಮಾಣ ಹೆಚ್ಚಾಗುತ್ತಿರುವುದು ಮತ್ತೆ ಆತಂಕ ಮೂಡಿಸಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 338 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 5 ಮಂದಿ ಅಸುನೀಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 17,058ಕ್ಕೆ ಇಳಿಕೆಯಾಗಿದೆ.