ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1298 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 32 ಮಂದಿ ಅಸುನೀಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಂದು ದಿನದಲ್ಲಿ 1833 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ 21,481ಕ್ಕೆ ಏರಿಕೆಯಾಗಿದ್ದು,
ಬೆಂಗಳೂರಿನಲ್ಲಿ 340 ಹೊಸದಾಗಿ ಸೋಂಕು ಪ್ರಕರಣಗಳು ಕಾಣಿಸಿಕೊಂಡಿದ್ದು, 10 ಮಂದಿ ಸೋಂಕಿಗೆ ಬಲಿಯಾಗಿದ್ದರೆ. ಈ ನಡುವೆ ಸೋಂಕಿನಿಂದ ಗುಣಮುಖಿತರಾದವರ ಸಂಖ್ಯೆ 471ಕ್ಕೆ ಏರಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 7913ಕ್ಕೆ ಕುಸಿದಿದೆ.