ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1610 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 32 ಮಂಇ ಮತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಪ್ರಕಟಿಸಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 29,16,977ಕ್ಕೆ ಏರಿಕೆಯಾದರೆ, 36,773ಕ್ಕೆ ಜಿಗಿತ ಕಂಡಿದೆ.
ಒಂದು ದಿನದಲ್ಲಿ 1640 ಸೋಂಕಿತರು ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 28,55,862ಕ್ಕೆ ಜಿಗಿತ ಕಂಡಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 24,266ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ 357 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 5ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 400 ಮಂದಿ ಗುಣಮುಖಿತರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8512ಕ್ಕೆ ಇಳಿಕೆಯಾಗಿದೆ.