ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1708 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 36 ಮಂದಿ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾನುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 386 ಸೋಂಕು ಪ್ರಕರಣಗಳು ದೃಢಪಟ್ಟರೆ, 9 ಮಂದಿ ಅಸುನೀಗಿದ್ದಾರೆ.
ರಾಜ್ಯದಲ್ಲಿ ಒಂದೇ ದಿನ 2463 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 28,18,476ಕ್ಕೆ ಏರಿಕೆಯಾಗಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 18,83,947ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 36,157ಕ್ಕೆ ಜಿಗಿತ ಕಂಡಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 29,291ಕ್ಕೆ ಇಳಿದಿದೆ.