ರಾಜ್ಯದಲ್ಲಿ 24 ಗಂಟೆಗಳ ಅವಧಿಯಲ್ಲಿ 1769 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, 30 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಒಂದು ದಿನದಲ್ಲಿ 1714 ಮಂದಿ ಗುಣಮುಖಿತರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 24,305ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ 411 ಸೋಂಕು ಪ್ರಕರಣಗಳು ವರದಿಯಾಗಿದೆ. ಈ ಮೂಲಕ ಕೊರೊನಾ ಸೋಂಕು ಪ್ರಮಾಣದಲ್ಲಿ ಮತ್ತೆ ಹೆಚ್ಚಳ ಕಂಡು ಬಂದಿದೆ.