ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1785 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, 25 ಮಂದಿ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 414 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 5 ಮಂದಿ ಅಸುನೀಗಿದ್ದಾರೆ.
ಒಂದೇ ದಿನದಲ್ಲಿ ರಾಜ್ಯದಲ್ಲಿ 1651 ಮಂದಿ ಗುಣಮುಖಿತರಾಗಿದ್ದು, ಬೆಂಗಳೂರಿನಲ್ಲಿ 554 ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ 24,414ಕ್ಕೆ ಏರಿಕೆಯಾದರೆ, ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 8560ಕ್ಕೆ ಏರಿದೆ.