ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1913 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 48 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜಧಾನಿ ಬೆಂಗಳೂರಿನಲ್ಲಿ 401 ಪ್ರಕರಣಗಳು ಕಂಡು ಬಂದಿದ್ದು, 8 ಮಂದಿ ಸಾವಿಗೀಡಾಗಿದ್ದಾರೆ.
ರಾಜ್ಯದಲ್ಲಿ ಒಂದೇ ದಿನದಲ್ಲಿ 2389 ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 28,43,956ಕ್ಕೆ ಏರಿಕೆಯಾಗಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 28,74,597ಕ್ಕೆ ಜಿಗಿತ ಕಂಡರೆ, ಸಾವಿನ ಸಂಖ್ಯೆ 35,944ಕ್ಕೆ ತಲುಪಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 34,234ಕ್ಕೆ ಇಳಿದಿದೆ.