ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 2,576 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2 ತಿಂಗಳ ನಂತರ 1 ಲಕ್ಷಕ್ಕಿಂತ ಕಡಿಮೆ ಸಂಖ್ಯೆಗೆ ಕುಸಿದಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ. ಸುಧಾಕರ್ ಸೋಮವಾರ ಟ್ವಿಟರ್ ನಲ್ಲಿ ಈ ವಿಷಯ ತಿಳಿಸಿದ್ದು, ರಾಜ್ಯದಲ್ಲಿ ಕೊರೊನಾ ಅಬ್ಬರ ಕಡಿಮೆ ಆಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 97,592ಕ್ಕೆ ಕುಸಿದಿದೆ.
ರಾಜ್ಯದಲ್ಲಿ ಒಂದೇ ದಿನ 93 ಮಂದಿ ಕೊರೊನಾಗೆ ಬಲಿಯಾಗಿದ್ದು, ಬೆಂಗಳೂರಿನಲ್ಲಿ 563 ಮಂದಿಗೆ ಸೋಂಕು ಕಾಣಿಸಿಕೊಂಡಿದೆ ಎಂದು ಅವರು ಟ್ವಿಟರ್ ನಲ್ಲಿ ತಿಳಿಸಿದ್ದಾರೆ.