ದೇಶದಲ್ಲಿ ಕಳೆದ 24 ಗಂಟೆಯಲ್ಲಿ 3.29 ಲಕ್ಷ ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, 2876 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2.29 ಕೋಟಿಗೆ ಏರಿಕೆಯಾದರೆ, ಸಾವಿನ ಸಂಖ್ಯೆ 2,49,992ಕ್ಕೆ ಜಿಗಿತ ಕಂಡಿದೆ.