ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 3222 ಕೊರೊನಾ ಸೋಂಕು ಪ್ರಕರಣಗಳು ಕಾಣಿಸಿಕೊಂಡಿದ್ದು, 93 ಮಂದಿ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜಧಾನಿ ಬೆಂಗಳೂರಿನಲ್ಲಿ 753 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 16 ಮಂದಿ ಅಸುನೀಗಿದ್ದಾರೆ.
ನಿನ್ನೆಗೆ ಹೋಲಿಸಿದರೆ ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಮಾಣ ಮತ್ತೆ ಹೆಚ್ಚಾಗಿದೆ. ನಿನ್ನೆ 2576 ಸೋಂಕು ಪ್ರಕರಣಗಳು ದೃಢಪಟ್ಟಿದ್ದವು.