ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 3282 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದರೆ, 111 ಮಂದಿ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 813 ಪ್ರಕರಣಗಳು ದೃಢಪಟ್ಟಿದ್ದು, 11 ಮಂದಿ ಅಸುನೀಗಿದ್ದಾರೆ.
ರಾಜ್ಯದಲ್ಲಿ ಒಂದೇ ದಿನ 12763 ಮಂದಿ ಗುಣಮುಖಿತರಾಗಿದ್ದು, ಬೆಂಗಳೂರಿನಲ್ಲಿ 9549 ಮಂದಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 76,505ಕ್ಕೆ ಇಳಿಕೆಯಾಗಿದೆ. ಒಟ್ಟಾರೆ ಸಾವಿನ ಸಂಖ್ಯೆ 35 ಸಾವಿರ ಗಡಿ ದಾಟಿದೆ.