ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 34,281 ಮಂದಿಗೆ ಕೊರೊನಾ ಸೋಂಕು ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದರೆ. 49,953 ಮಂದಿ ಗುಣಮುಖಿತರಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಪ್ರಕಟಿಸಿದ ಬುಲೆಟಿನ್ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 23,06,655ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 468 ಮಂದಿ ಮೃತಪಟ್ಟಿದ್ದು, ಒಟ್ಟಾರೆ ಸಾವಿನ ಸಂಖ್ಯೆ 23,306ಕ್ಕೆ ಜಿಗಿತ ಕಂಡಿದೆ.
ರಾಜ್ಯದಲ್ಲಿ ಒಟ್ಟಾರೆ ಗುಣಮುಖಿತರ ಸಂಖ್ಯೆ 1,72,4438ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 5,58,890ಕ್ಕೆ ಇಳಿದಿದೆ.
ಬೆಂಗಳೂರಿನಲ್ಲಿ 11,772 ಸೋಂಕು ಪ್ರಕರಣಗಳು ವರದಿಯಾಗಿದ್ದು, 29,238 ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ. 218 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ನಗರದಲ್ಲಿ ಕೊರೊನಾ ಅಬ್ಬರ ಮುಂದುವರಿದಿದೆ.