ರಾಜ್ಯದಲ್ಲಿ ಬುಧವಾರವೂ 39,047 ಮಂದಿಗೆ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, 229 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 14,39,882ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 15,036ಕ್ಕೆ ತಲುಪಿದೆ.
ರಾಜ್ಯದಲ್ಲಿ ಒಂದೇ ದಿನ ದಾಖಲೆಯ 11,833 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 10,95,883ಕ್ಕೆ ಏರಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 3,28,884ಕ್ಕೆ ಜಿಗಿತ ಕಂಡಿದೆ.
ಬೆಂಗಳೂರಿನಲ್ಲಿ 22,596 ಮಂದಿಗೆ ಸೋಂಕು ತಗುಲಿದ್ದು, 4,530 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದಾರೆ. 137 ಮಂದಿ ಒಂದೇ ದಿನದಲ್ಲಿ ಕೊರೊನಾಗೆ ಬಲಿಯಾಗಿದ್ದಾರೆ.