ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಮಾಣದಲ್ಲಿ ಕುಸಿತ ಕಂಡು ಬಂದಿದ್ದು, ಕಳೆದ 24 ಗಂಟೆಯಲ್ಲಿ 673 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 13 ಮಂದಿ ಅಸುನೀಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 214 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು, ಮೂವರು ಮೃತಪಟ್ಟಿದ್ದಾರೆ.