ರಾಜ್ಯದಲ್ಲಿ 847 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 20 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ನಿನ್ನೆಗೆ ಹೋಲಿಸಿದರೆ ರಾಜ್ಯದಲ್ಲಿ ಕೊರೊನಾ ಪ್ರಮಾಣದಲ್ಲಿ ಮತ್ತೆ ಏರಿಕೆ ಕಂಡು ಬಂದಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 312 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 6ಮಂದಿ ಅಸುನೀಗಿದ್ದಾರೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 13,621ಕ್ಕೆ ಇಳಿಕೆಯಾಗಿದೆ.