![](https://rajnewskannada.in/wp-content/uploads/2021/02/corona-1-e1614138794921.jpg)
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 9,579 ಹೊಸದಾಗಿ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ಬೆಂಗಳೂರಿನಲ್ಲಿ 6387 ಪ್ರಕರಣಗಳು ಬೆಳಕಿಗೆ ಬಂದಿವೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 10,74,869ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಒಂದೇ ದಿನದಲ್ಲಿ 52 ಮಂದಿ ಕೊರೊನಾಗೆ ಬಲಿಯಾಗಿದ್ದು, ಬೆಂಗಳೂರಿನಲ್ಲಿ 40 ಅಸುನೀಗಿದ್ದಾರೆ. ಈ ಮೂಲಕ ಒಟ್ಟಾರೆ ಸಾವಿನ ಸಂಖ್ಯೆ 12,941ಕ್ಕೆ ಜಿಗಿತ ಕಂಡಿದೆ.
ಒಂದೇ ದಿನದಲ್ಲಿ 2767 ಜನ ಸೋಂಕಿತರು ಗುಣಮುಖಿತರಾಗಿದ್ದು, ಬೆಂಗಳೂರಿನಲ್ಲಿ 1038 ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಗುಣಮುಖಿತರ ಸಂಖ್ಯೆ 9,85,924ಕ್ಕೆ ಏರಿಕೆಯಾಗಿದೆ.