ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 34,804 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿ 20,733 ಸೋಂಕು ಪ್ರಕರಣಗಳು ಪತ್ತೆಯಾಗಿವೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾನುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 13,39,201ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಒಂದೇ ದಿನ 143 ಮಂದಿ ಅಸುನೀಗಿದ್ದು, ಬೆಂಗಳೂರಿನಲ್ಲಿ 77 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 14,426ಕ್ಕೆ ಏರಿಕೆಯಾಗಿದೆ.
ಒಂದೇ ದಿನದಲ್ಲಿ 6982 ಮಂದಿ ಸೋಂಕಿತರು ಗುಣಮುಖಿತರಾಗಿದ್ದು, ಬೆಂಗಳೂರಿನಲ್ಲಿ 2285 ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಗುಣಮುಖಿತರ ಸಂಖ್ಯೆ 10,62,594ಕ್ಕೆ ಏರಿಕೆಯಾಗಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 26,2162ಕ್ಕೆ ಜಿಗಿತ ಕಂಡಿದೆ.