ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಹಿರಿಯ ಐ ಎ ಎಸ್ (IAS) ಅಧಿಕಾರಿ ಮಂಜುನಾಥ್ (MANJUNATH) ಅವರನ್ನ ಎಸಿಬಿ (ACB) ಅಧಿಕಾರಿಗಳು ಬಂಧಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇಂದು ಒಂದೇ ದಿನ 2 ಪ್ರತ್ಯೇಕ ಕೇಸಲ್ಲಿ ಐಎಎಸ್ , ಹಾಗೂ ಐಪಿಎಸ್ ಅಧಿಕಾರಿಗಳನ್ನ ಬಂಧಿಸಲಾಗಿದೆ. 5 ಲಕ್ಷ ಲಂಚ ಪ್ರಕರಣದಲ್ಲಿ ಐಎಎಸ್ ಅಧಿಕಾರಿಯನ್ನ ಬಂಧಿಸಲಾಗಿದೆ.
ರಾಜ್ಯಕ್ಕೆ ಅವಮಾನವಾಗ್ತಿದ್ರೂ ಜಿಲ್ಲಾಧಿಕಾರಿ ಬಂಧನವಾಗಿಲ್ಲ ಏಕೆ ಎಂದು ಹೈಕೋರ್ಟ್ ಪ್ರಶ್ನಿಸಿದೆ. ರಾಜ್ಯ ಸರ್ಕಾರವೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ಯಾ ಎಂದು ಕೋರ್ಟ್ ಪ್ರಶ್ನಿಸಿದೆ. ಅತ್ತ ವಿಚಾರಣೆ ನಡೆಯುತ್ತಿದ್ದಂತೆ ಇತ್ತ ಜಿಲ್ಲಾಧಿಕಾರಿಯನ್ನ ಬಂಧಿಸಲಾಗಿದೆ. ಬಂಧಿತ ಮಂಜುನಾಥ್ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದರು.
ಲಂಚ ಪ್ರಕರಣದಲ್ಲಿ ಮಂಜುನಾಥ್ ಅವರನ್ನು ಮೂರನೇ ಆರೋಪಿಯನ್ನಾಗಿ ಮಾಡುವಂತೆ ಕೋರಿ ಬೆಂಗಳೂರು ಎಸಿಬಿ ಪೊಲೀಸರು ಭ್ರಷ್ಟಾಚಾರ ಪ್ರಕರಣ ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ವರದಿಗೆ ಸಮ್ಮತಿಸಿರುವ ವಿಶೇಷ ನ್ಯಾಯಾಲಯ ಐಎಎಸ್ ಅಧಿಕಾರಿ ಮಂಜುನಾಥ್ ವಿಚಾರಣೆಗೆ ಹಸಿರು ನಿಶಾನೆ ತೋರಿತ್ತು. ಈ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ಮಂಜುನಾಥ್ ಅವರನ್ನು ಬಂಧಿಸಿದ್ದಾರೆ.
ಆನೇಕಲ್ ತಾಲೂಕಿನ ಕೂಡ್ಲು ಗ್ರಾಮದಲ್ಲಿ 38 ಗುಂಟೆ ಜಮೀನು ಒಡೆತನಕ್ಕೆ ಸಂಬಂಧಿಸಿದ ವ್ಯಾಜ್ಯ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಬಾಕಿ ಇತ್ತು. ಈ ಪ್ರಕರಣದ ಪೂರ್ಣ ವಿಚಾರಣೆ ನಡೆಸಿದ್ದ ಜಿಲ್ಲಾಧಿಕಾರಿ ಜೆ. ಮಂಜುನಾಥ್ ತೀರ್ಪು ಪ್ರಕಟ ಮಾಡಿರಲಿಲ್ಲ. ಈ ಕುರಿತು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ್ದ ಅರ್ಜಿದಾರ ಆಜಂಪಾಷಾ ಅವರಿಗೆ ಅಧೀನ ಸಿಬ್ಬಂದಿ ಮಹೇಶ್ ಅವರನ್ನು ಕಾಣಲು ಸೂಚಿಸಲಾಗಿತ್ತು. ಮಹೇಶ್ ಅವರನ್ನು ಭೇಟಿ ಮಾಡಿದಾಗ, “ನಿನ್ನ ಪರ ಅನುಕೂಲಕರ ತೀರ್ಪು ನೀಡಲು 5 ಲಕ್ಷ ರೂ. ಲಂಚ ನೀಡುವಂತೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ವ್ಯವಸ್ಥಾಪಕ ಮಹೇಶ್ ಹಾಗೂ ನ್ಯಾಯಾಲಯ ವಿಭಾಗದ ಚೇತನ್ ಕುಮಾರ್ ಬೇಡಿಕೆ ಇಟ್ಟಿದ್ದರು.
ಇದನ್ನೂ ಓದಿ : – PSI ಅಕ್ರಮ ನೇಮಕಾತಿ ಪ್ರಕರಣ – ಎಡಿಜಿಪಿ ಅಮೃತ್ ಪಾಲ್ ಬಂಧನ