ನವದೆಹಲಿ: ಭಾರತದಲ್ಲಿ ಒಂದೇ ದಿನ ಗರಿಷ್ಠ ಕೊರೋನಾ ಸೋಂಕು ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ ಒಟ್ಟು 72,330 ಕೊರೋನಾ ಪ್ರಕರಣಗಳು ದಾಖಲಾಗಿವೆ.
ಕಳೆದ ಐದು ತಿಂಗಳಲ್ಲಿ ಗರಿಷ್ಠ ಕೋವಿಡ್ ಪ್ರಕರಣಗಲು ದೇಶದಲ್ಲಿ ದಾಖಲಾಗಿವೆ. ಮಹಾರಾಷ್ಟ್ರವೊಂದರಲ್ಲಿಯೇ 39,544 ಕೊರೋನಾ ಪ್ರಕರಣಗಳು ವರದಿಯಾಗಿವೆ. ಭಾರತದಲ್ಲಿ ಪ್ರಸ್ತುತ 5,84,055 ಸಕ್ರಿಯ ಕೊರೋನಾ ಪ್ರಕರಣಗಳಿವೆ.
ಕಳೆದ 24 ಗಂಟೆಗಳಲ್ಲಿ 459 ಮಂದಿ ಕೋವಿಡ್ನಿಂದ ಮೃತರಾಗಿದ್ದು, ದೇಶದಲ್ಲಿ ಕೋವಿಡ್ನಿಂದಾಗಿ ಮೃತರಾದವರ ಸಂಖ್ಯೆ 1,62,927ಗೆ ತಲುಪಿದೆ.
ದೇಶದಲ್ಲಿ ಈವರೆಗೆ ಒಟ್ಟು 6,51,17,896 ಮಂದಿ ಕೊರೋನಾ ಲಸಿಕೆಯನ್ನು ಪಡೆದಿದ್ದಾರೆ. ದೇಶದಲ್ಲಿ ಇಂದಿನಿಂದ 45 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆಯನ್ನು ನಿಡಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.