ಬೆಂಗಳೂರು: ಕೋವಿಡ್ ಸೋಂಕಿತರಿಗೆ ಹಾಸಿಗೆ ಮೀಸಲಿಡದ ಅಪಾದನೆ ಬಂದ ಹಿನ್ನೆಲೆಯಲ್ಲಿ ನಗರದ 66 ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ತುರ್ತು ಅವರು ತುರ್ತು ನೋಟೀಸ್ ಜಾರಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೆ ಏರಿಕೆಯಾಗುತ್ತಿದ್ದು, ಕೋವಿಡ್ ಸೋಂಕು ಲಕ್ಷಣಗಳಿರುವವರನ್ನು ತ್ವರಿತವಾಗಿ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡುವ ಸಲುವಾಗಿ ರಾಜ್ಯ ಸರ್ಕಾರವು ಖಾಸಗಿ ಆಸ್ಪತ್ರೆಗಳಲ್ಲಿ ಶೇ. 50 ರಷ್ಟು ಹಾಸಿಗೆಗಳನ್ನು ಕೋವಿಡ್ ಸೋಂಕಿತರಿಗಾಗಿ ಮೀಸಲಿಡಬೇಕೆಂದು ಸೂಚನೆ ನೀಡಲಾಗಿರುತ್ತದೆ.
ಆ ನಿಯಮ ಪಾಲಿಸಿದ ಅಸ್ಪತ್ರೆಗೆ ತುರ್ತು ನೋಟಿಸ್ ನೀಡಲಾಗಿದೆ. ಈ ಹಿಂದೆ ವಿಕ್ರಂ ಆಸ್ಪತ್ರೆ, ಪೋರ್ಟಿಸ್ ಆಸ್ಪತ್ರೆ (ಕನ್ನಿಂಗ್ ಹ್ಯಾಂ ರಸ್ತೆ), ಆಸ್ಟರ್ ಸಿಎಂಐ ಆಸ್ಪತ್ರೆ, ಕೊಲಂಬಿಯಾ ಏಷಿಯಾ ಆಸ್ಪತ್ರೆ ಹಾಗೂ ಬ್ಯಾಪ್ಟಿಸ್ಟ್ ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿ ಸರ್ಕಾರದ ಆದೇಶ ಪಾಲನೆ ಮಾಡದಿದ್ದಕ್ಕೆ ಬಿಬಿಎಂಪಿ ಆಯುಕ್ತರು ನೋಟಿಸ್ ಜಾರಿ ಮಾಡಿದ್ದರು.