ದೇಶದಲ್ಲಿ ಒಂದು ದಿನದಲ್ಲಿ 35,178 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 440 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಂದು ದಿನದಲ್ಲಿ 36,830 ಸೋಂಕಿತರು ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3,14,48,754ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,69,846ಕ್ಕೆ ಕುಸಿದಿದೆ.