ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಸ್ಪೋಟಗೊಂಡಿದ್ದು, ಕಳೆದ 24 ಗಂಟೆಯಲ್ಲಿ ದಾಖಲೆಯ 17,489 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಸೋಂಕಿತರ ಸಂಖ್ಯೆ 11,41,998ಕ್ಕೆ ಏರಿಕೆಯಾಗಿದೆ.
ಒಂದೇ ದಿನ ಕೊರೊನಾಗೆ 80 ಜನರ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 13,270 ಜನರು ಸಾವನ್ನಪ್ಪಿದ್ದಾರೆ. ಸೋಂಕಿತರ ಪೈಕಿ 10,09,549 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 1,19,160 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 11,404 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಕೊರೊನಾ ಸೋಂಕಿಗೆ 43 ಜನರು ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 5,063 ಜನರು ಸಾವನ್ನಪ್ಪಿದ್ದಾರೆ. ಈವರೆಗೆ 5,33,842 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಪೈಕಿ 4,41,054 ಜನರು ಗುಣಮುಖರಾಗಿದ್ದಾರೆ. 87,724 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.