ಭಾರತದಲ್ಲಿ ಮತ್ತೆ ಲಕ್ಷ ದಾಟಿದ ಕೊರೋನಾ ಸೋಂಕು ಪ್ರಕರಣಗಳು: ಹೆಚ್ಚಿದ ಆತಂಕ

ನವದೆಹಲಿ: ಭಾರತದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕ ಸೃಷ್ಟಿಸಿದೆ. ನಿನ್ನೆ ಒಂದೇ ದಿನ ದೇಶಾದ್ಯಂತ 1,15,736 ಕೊರೋನಾ ಪ್ರಕರಣಗಳು ದಾಖಲಾಗಿವೆ. ನಿನ್ನೆ ಒಂದೇ ದಿನ ಕೊರೋನಾ ಸೋಂಕಿನಿಂದ 59,856 ಮಮದಿ ಕೋವಿಡ್​ 19 ಸೋಂಕಿನಿಂದ ಗುಣಮುಖರಾಗಿದ್ದಾರೆ.

ಈ ಮೂಲಕ ಇಲ್ಲಿಯವರೆಗೆ ಕೋವಿಡ್​ 19 ಸೋಂಕಿನಿಂದ ಒಟ್ಟು 1,17,92,135 ಜನ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಭಾನುವಾರ

ಭಾನುವಾರ, 1,03,764 ಹೊಸ ಪ್ರಕರಣಗಳು ವರದಿಯಾಗಿತ್ತು. ಡಿಸೆಂಬರ್ ತಿಂಗಳಲ್ಲಿ 97,894 ಹೊಸ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿ ಇದುವರೆಗೆ ಕರೋನಾ ಸಾಂಕ್ರಾಮಿಕ ರೋಗದಿಂದ 1,66,207 ಜನರು ಮೃತಪಟ್ಟಿದ್ದಾರೆ. ಇನ್ನು ಸೋಂಕಿತರ ಸಂಖ್ಯೆ 8,38,650 ಅನ್ನು ತಲುಪಿದೆ.

ಹೀಗಾಗಿ ಕೊರೋನಾ ನಿಯಂತ್ರಣ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಕರ್ನಾಟಕದಲ್ಲಿ ಮಂಗಳವಾರ 6150 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ 39 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಸದ್ಯಕ್ಕೆ 45107 ಸಕ್ರಿಯ ಪ್ರಕರಣಗಳಿವೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!