ಕೋವಿಡ್ ನಿಂದ ಮೃತಪಟ್ಟವರ ಕುಟುಂಬಗಳಿಗೆ ತಲಾ 1 ಲಕ್ಷ ರೂ. ಪರಿಹಾರ ಮೊತ್ತ ಹಂಚಿಕೆಗೆ ರಾಜ್ಯ ಸರಕಾರ ಆದೇಶಿಸಿದೆ.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಿಪಿಎಲ್ ಕುಟುಂಬಗಳಿಗೆ ಕೋವಿಡ್ ನಿಂದ ಮೃತಪಟ್ಟವರ ಪರಿಹಾರವಾಗಿ 1 ಲಕ್ಷ ರೂ. ಘೋಷಿಸಿದ್ದು ಸುಮಾರು ಎರಡು ತಿಂಗಳ ನಂತರ ಪರಿಹಾರ ಮೊತ್ತ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಜಿಲ್ಲಾಧಿಕಾರಿಗಳು ಪಿಡಿ ಖಾತೆಯಿಂದ ಕೋವಿಡ್ ಮೃತರ ಕುಟುಂಬಗಳಿಗೆ 1 ಲಕ್ಷ ರೂ. ಪರಿಹಾರ ನೀಡಬೇಕು. ಚೆಕ್ ಮೂಲಕ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಲೋಪ ಕಂಡು ಬಂದರೆ ಜಿಲ್ಲಾಧಿಕಾರಿಗಳೇ ಹೊಣೆ ಹೊರಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.