ಇತ್ತೀಚೆಗಷ್ಟೇ ತಾಯಿಯನ್ನು ಕಳೆದುಕೊಂಡ ಆಘಾತದಲ್ಲಿದ್ದ ಭಾರತ ಕ್ರಿಕೆಟ್ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸೋದರಿ ಕೋವಿಡ್ ಗೆ ಬಲಿಯಾಗಿದ್ದಾರೆ. ಈ ಮೂಲಕ ಮತ್ತೊಂದು ಆಘಾತ ಒಳಗಾಗಿದ್ದಾರೆ.
ಕೊರೊನಾ ಸೋಂಕಿಗೆ ವೇದಾ ಕೃಷ್ಣಮೂರ್ತಿ ಸಹೋದರಿ ಕಡೂರು ಪಟ್ಟಣದ ವತ್ಸಲಾ (40) ಕೋವಿಡ್ ನಿಂದ ಮೃತಪಟ್ಟಿದ್ದಾರೆ.
10 ದಿನದ ಹಿಂದೆಯಷ್ಟೇ ವೇದಾ ಕೃಷ್ಣಮೂರ್ತಿ ತಾಯಿ ಕೊರೊನಾ ಸೋಂಕಿಗೆ ಚೆಲುವಾಂಭ (63) ಬಲಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಸೋದರಿ ವತ್ಸಲಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕ್ಕಮಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ವೇದಾ ಕೃಷ್ಣಮೂರ್ತಿ 10 ದಿನಗಳ ಅಂತರದಲ್ಲಿ ತಾಯಿ- ತಂಗಿಯನ್ನು ಕಳೆದುಕೊಂಡಿದ್ದಾರೆ.