ಕಲಬುರ್ಗಿ : ಮಾರಕಾಸ್ತ್ರಗಳಿಂದ ಕೊಚ್ಚಿ ಆಟೋ ಚಾಲಕನ ಬರ್ಬರ ಹತ್ಯೆ ಮಾಡಿರುವ ಘಟನೆ ಕಲಬುರ್ಗಿ ನಗರದ ದರ್ಗಾ ರಸ್ತೆಯ ಸನಾ ಹೋಟೆಲ್ ಬಳಿ ನಡೆದಿದೆ.
ಮಿಲ್ಲತ್ ನಗರ ಬಡಾವಣೆಯ ನಿವಾಸಿ ಜಿಶಾನ್ (25) ಹತ್ಯೆಗೊಳಗಾದ ಆಟೋ ಚಾಲಕ ಎಂದು ಗುರುತಿಸಲಾಗಿದೆ. ಸನಾ ಹೋಟೆಲ್ ಬಳಿ ನಿಂತಾಗ ನಾಲ್ಕೈದು ಜನರು ಬಂದು ಜಿಶಾನ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿದ್ದಾರೆ.
ಗಂಭೀರ ಗಾಯಗೊಂಡ ಜಿಶಾನ್‌ನ್ನ ತಡರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಬೆಳಗಿನ ಜಾವ ಸಾವನ್ನಪ್ಪಿದ್ದಾನೆ.
ಘಟನೆಗೆ ಹಳೆ ವೈಷಮ್ಯವೆ ಕಾರಣ ಎನ್ನುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಘಟನೆ ಬಗ್ಗೆ ರೋಜಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.