ಕೊರೊನಾಕ್ಕೆ ಹೆದರಿ ನಿವೃತ್ತ ಉಪ ತಹಶೀಲ್ದಾರ್ ಆತ್ಮಹತ್ಯೆಗೆ ಶರಣು

ಚಿಕ್ಕಮಗಳೂರು : ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೊನಾ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು ಆಗುವುದಿಲ್ಲ ಎಂದು ನಿವೃತ್ತ ಉಪ ತಹಶೀಲ್ದಾರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಬೇಲೆನಹಳ್ಳಿ ತಾಂಡ್ಯಾದಲ್ಲಿ ನಡೆದಿದೆ.

ಮೃತರನ್ನ 72 ವರ್ಷದ ಸೋಮಾ ನಾಯ್ಕ್ ಎಂದು ಗುರುತಿಸಲಾಗಿದೆ. ಮೃತ ಸೋಮಾ ನಾಯ್ಕ್ ನಿವೃತ್ತಿಯ ಬಳಿಕ ಬೇಲೆನಹಳ್ಳಿ ತಾಂಡ್ಯಾದಲ್ಲಿ ವಾಸವಾಗಿದ್ದರು. ಕೊರೊನಾ ಸೋಂಕು ತಗುಲಿದ್ದರಿಂದ ಮನನೊಂದು ಸೋಮಾ ನಾಯ್ಕ್, ನನ್ನಿಂದ ಕುಟುಂಬಸ್ಥರಿಗೆ ಯಾರಿಗೂ ಏನು ಆಗುವುದು ಬೇಡೆಂದು, ಎಲ್ಲರೂ ಚೆನ್ನಾಗಿರಿ ಎಂದು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪಲ್ಸ್ ರೇಟ್ ಕಡಿಮೆಯಾಗಿ, ಉಸಿರಾಟಕ್ಕೆ ತೊಂದರೆಯಾಗಿ ಸಾವು ಆಗಲು ಜೀವಕ್ಕೆ ಕಷ್ಟವಾದರೆ ಮಾತ್ರ ಆತ್ಮಹತ್ಯೆ. ಸುಖವಾಗಿ ಸತ್ತರೆ ಚಿಂತೆಯೇ ಇಲ್ಲ ಎಂದು ಬರೆದಿಟ್ಟಿದ್ದು, ಅಮ್ಮಾ, ಮಾರಿಕಾಂಭ ದೇವಿ, ನಿನ್ನ ಕ್ಷೇತ್ರವನ್ನ ಅಭಿವೃದ್ಧಿ ಮಾಡಲು ಸಾಧ್ಯವಾಗಿಲ್ಲ. ಅಷ್ಟರಲ್ಲಿಯೇ ನೀನು ನನ್ನನ್ನ ಕರೆದುಕೊಂಡು ಬಿಟ್ಟೆ ಎಂದು ದೇವರಿಗೂ ಕ್ಷಮೆ ಕೇಳಿದ್ದಾರೆ. ನನಗೆ ಕೊರೋನಾ ಪಾಸಿಟಿವ್ ಇದ್ದ ಕಾರಣ. ಅಗ್ನಿಸ್ಪರ್ಶ ಮಾಡಲು ಅನುಕೂಲವಾಗುವಂತೆ ಜಾಗ ಆರಿಸಿಕೊಂಡಿದ್ದೇನೆ. ನನ್ನ ಬಗ್ಗೆ ಯಾರೂ ಯೋಚಿಸಬೇಡಿ. ನಿಮ್ಮ ಜೀವಕ್ಕೆ ದಾರಿ ಮಾಡಿದ್ದೇನೆ, ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿಟ್ಟು ತೋಟದಲ್ಲಿ ತಮ್ಮ ಕಾರಿನಲ್ಲಿ ಶೂಟ್ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

ಸೋಮಾ ನಾಯ್ಕ್ ‌ಅವರು ಇದೇ 7ರಂದು ಕೋವಿಡ್ ಪರೀಕ್ಷೆಗೆ ಮಾದರಿ ನೀಡಿದ್ದರು. 9ರಂದು ವರದಿ ಬಂದಿತ್ತು, ಅವರಿಗೆ ಕೋವಿಡ್ ದೃಢಪಟ್ಟಿತ್ತು. ತರೀಕೆರೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ತರೀಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!