ಮಂಗಳೂರು : ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕದ್ರಿ ಪಿಂಟೋಸ್ ಲೇನ್ ನಲ್ಲಿ ನಡೆದಿದೆ. ಕದ್ರಿ ಪಿಂಟೋ ಲೇನ್ ನಿವಾಸಿಗಳಾದ ಸುರೇಶ್ ಮತ್ತು ವಾಣಿ ಆತ್ಮಹತ್ಯೆ ಮಾಡಿಕೊಂಡ ದಂಪತಿ.
ಸುರೇಶ್ ಅವರು ಬಾವಿಗೆ ಹಾರಿದರೆ, ವಾಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವ್ಯವಹಾರ ನಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.