ಮಂಗಳೂರಿನಲ್ಲಿ ನೇಣು ಬಿಗಿದು ಯುವತಿ ಆತ್ಮಹತ್ಯೆ

ಮಂಗಳೂರು: ನೇಣು ಬಿಗಿದು ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ರೆಂಜಿಲಾಡಿ ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ರೆಂಜಿಲಾಡಿ ಗ್ರಾಮದ ಹೊಸಮನೆ ನಿವಾಸಿ ಚೆನ್ನಪ್ಪ ಗೌಡ ಎಂಬವರ ಪುತ್ರಿ ಪುಷ್ಪಲತಾ ಯಾನೆ ದೀಕ್ಷಾ ಎಂದು ಗುರುತಿಸಲಾಗಿದೆ.

ಕಡಬದ ಶೋ ರೂಂ ಒಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿ ವೈಯಕ್ತಿಕ ಕಾರಣಕ್ಕಾಗಿ ತನ್ನ ಮನೆ ಸಮೀಪ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!