ಹಲವಾರು ಪ್ರಕರಣಗಳಲ್ಲಿ ಜೈಲಿಗೆ ಹೋಗಿದ್ದರೂ ಜಾಮೀನಿನ ಮೇಲೆ ಹೊರಗೆ ಬಂದು ಅಪರಾಧ ಪ್ರಕರಣಗಳಲ್ಲಿ ತೊಡಗಿಸಿಕೊಳ್ಳತ್ತಿದ್ದ ನಟೋರಿಯಸ್ ಕ್ರಿಮಿನಲ್ ನನ್ನು ಬೆಂಗಳೂರಿನ ಕೆಪಿ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ.
ಸಂಜಯ್ ಬಂಧಿತ ಆರೋಪಿ. ಈತ 2013ರಿಂದ ಇಲ್ಲಿಯವರೆ ಕೊಲೆ, ಕೊಲೆ ಯತ್ನ, ದರೋಡೆ, ಸುಲಿಗೆ, ಗಾಂಜಾ ಮಾರಾಟ ಸೇರಿದಂತೆ ಹಲವು ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ.
ಅನೇಕ ಬಾರಿ ಜೈಲಿಗೆ ಹೋಗಿರುವ ಸಂಜಯ್, ಜಾಮೀನು ಪಡೆದು ಹೊರಬಂದು ನಿರಂತರ ಕಾನೂನುಬಾಹಿರ ಚಟುವಟಿಕೆಗೆ ಒಳಗಾಗುತ್ತಿದ್ದ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದ್ದಾರೆ.