ಧಾರವಾಡದ ಬಾಡಾ ಗ್ರಾಮದ ಬಳಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಮರಕ್ಕೆ ಕ್ರೂಸರ್ ಡಿಕ್ಕಿ ಹೊಡೆದು ಮೂವರು ಮಕ್ಕಳು ಸೇರಿ 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ.
ಇಂದು ನಡೆಯಬೇಕಿದ್ದ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮನಸೂರ ಗ್ರಾಮದಿಂದ ಬೆನಕನಟ್ಟಿಗೆ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿ ಈ ಅನಾಹುತ ಸಂಭವಿಸಿದೆ. ಮೃತರನ್ನು ಮಹೇಶ್ವರಯ್ಯ (11), ಅನನ್ಯ (14), ಹರೀಶ್ (12), ಶಿಲ್ಪಾ (34), ನೀಲವ್ವ(60), ಮಧುಶ್ರೀ (20) ಹಾಗೂ ಶಂಭುಲಿಂಗಯ್ಯ (35) ಎಂದು ಗುರುತಿಸಲಾಗಿದೆ.
ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಬೆನ್ನಲ್ಲೇ ಕ್ರೂಸರ್ ಚಾಲಕ ಪರಾರಿಯಾಗಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ :- ಗಣಿ ಮಾಲೀಕರಿಗೆ ಗುಡ್ ನ್ಯೂಸ್ ನೀಡಿದ ಸುಪ್ರೀಂಕೋರ್ಟ್ ..!