ಬೆಂಗಳೂರು: ನ್ಯಾಯಾಧೀಶರು ಸರ್ವಜ್ಞರಲ್ಲ. ನಾವು ತಂತ್ರಜ್ಞರ ಸಲಹೆಯಂತೆಯೇ ಕೆಲಸ ಮಾಡುತ್ತಿದ್ದೇವೆ. ಲಸಿಕೆ ಎಷ್ಟು ಉತ್ಪಾದನೆ ಆಗುತ್ತದೆ ಎಂದು ನ್ಯಾಯಾಧೀಶರ ವಿರುದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅಸಮಾಧಾನ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈಕೋರ್ಟ್ ತರಾಟೆಗೆ ಪ್ರತಿಕ್ರಿಯಿಸಿ, ನ್ಯಾಯಾಧೀಶರು ಸರ್ವಜ್ಞರಲ್ಲ. ನಾವು ತಂತ್ರಜ್ಞರ ಸಲಹೆಯಂತೆಯೇ ಕೆಲಸ ಮಾಡುತ್ತಿದ್ದೇವೆ. ಲಸಿಕೆ ಎಷ್ಟು ಉತ್ಪಾದನೆ ಆಗುತ್ತದೆ. ಯಾವ ಪ್ರಮಾಣದಲ್ಲಿ ಲಸಿಕೆ ಹಂಚಿಕೆಯಾಗಬೇಕು ಎಂಬುದನ್ನು ತಾಂತ್ರಿಕ ಸಲಹಾ ಸಮಿತಿ ನೀಡಿದ ಸಲಹೆ ಪ್ರಕಾರ ಹಂಚಿಕೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಕೂಡ ಹೇಳಿದೆ ಅದರಂತೆ ನಾವು ಪಾಲಿಸುತ್ತಿದ್ದೇವೆ ಎಂದು ತಿರುಗೇಟು ನೀಡಿದ್ದಾರೆ.
ಸಾವು ಸಾಂಕ್ರಾಮಿಕ ರೋಗಗಳನ್ನು ಮುಂದಿಟ್ಟುಕೊಂಡು ವಿಕೃತಾನಂದ ಪಡುತ್ತಿದೆ. ರೋಗದ ವಿಷಯದಲ್ಲಿ ರಾಜಕೀಯ ಮಾಡಲಾಗುತ್ತಿದೆ. ವಿದೇಶಗಳ ಜನಸಂಖ್ಯೆ ಮತ್ತು ಮರಣ ಪ್ರಮಾಣ ಹಾಗೂ ಭಾರತದ ಜನಸಂಖ್ಯೆ ಮತ್ತು ಮರಣ ಪ್ರಮಾಣ ಎಲ್ಲವನ್ನು ಹೋಲಿಕೆ ಮಾಡಿ ನೋಡಲಿ. ಇಟಲಿಯಲ್ಲಿ ನರೇಂದ್ರ ಮೋದಿ ಪ್ರಧಾನಿಯಲ್ಲ. ಈಗ ಆಗುತ್ತಿರುವ ಸಾವು-ನೋವಿಗೆ ನಾವು ಚೈನಾ ವೈರಸ್ನ್ನು ದೂರಬೇಕೆ ಹೊರತು, ಪ್ರಧಾನಿ ನರೇಂದ್ರ ಮೋದಿಯವರನ್ನಲ್ಲ ಎಂದರು.