ನೈಋತ್ಯ ಹಾಗೂ ಆಗ್ನೇಯ ಬಂಗಾಳ ಕೊಲ್ಲಿ ( BANGALA KOLLI ) ಯಲ್ಲಿ ಮಾಂಡೌಸ್ ಚಂಡಮಾರುತ ತೀವ್ರಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ ಉತ್ತರ ತಮಿಳುನಾಡು, ಪುದುಚೇರಿ ಹಾಗೂ ದಕ್ಷಿಣ ಆಂಧ್ರ ಪ್ರದೇಶ ( ANDRA PRADEES ) ದ ಕರಾವಳಿ ಭಾಗದಲ್ಲಿ ಭಾರಿ ಮಳೆಯ ಎಚ್ಚರಿಕೆಯನ್ನು ನೀಡಿದೆ.
ಹವಾಮಾನ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದ್ದು, ಮಾಂಡೌಸ್ ಚಂಡಮಾರುತ ಪಶ್ಚಿಮ-ವಾಯುವ್ಯದ ಕಡೆಗೆ ಚಲಿಸಲಿದ್ದು, ಡಿಸೆಂಬರ್ 7 ರಂದು ಇದರ ತೀವ್ರತೆ ಹೆಚ್ಚಾಗಲಿದೆ. ಡಿಸೆಂಬರ್ 8 ರಂದು ಉತ್ತರ ತಮಿಳುನಾಡು, ಪುದುಚೇರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಭಾಗಕ್ಕೆ ತಲುಪಲಿದ್ದು, ನೈಋತ್ಯ ಬಂಗಾಳಕೊಲ್ಲಿ ತಲುಪುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಇದನ್ನು ಓದಿ : – ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಗೆ ಗೆಲುವು
ಮಾಂಡೌಸ್ ಚಂಡಮಾರುತದ ಪ್ರಭಾವದಿಂದಾಗಿ ಮುಂದಿನ 2 ದಿನಗಳ ಕಾಲ ಹಲವಾರು ರಾಜ್ಯಗಳಲ್ಲಿ ಭಾರೀ ಪ್ರಮಾಣದ ಮಳೆಯಾಗಲಿದೆ. ತಮಿಳುನಾಡಿ ( THAMILNADU ) ನ ಕರಾವಳಿ ಭಾಗ, ಪುದುಚೇರಿ ಮತ್ತು ಕಾರೈಕಲ್ ನಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ. ಆಂಧ್ರಪ್ರದೇಶದ ದಕ್ಷಿಣ ಕರಾವಳಿ ಭಾಗ ಮತ್ತು ರಾಯಲಸೀಮಾದ ಅಕ್ಕ ಪಕ್ಕದ ಪ್ರದೇಶಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಮಾಹಿತಿ ನೀಡಿದೆ.
ಇದನ್ನು ಓದಿ : – ಗೆಲುವಿನತ್ತ ಬಿಜೆಪಿಯ ಹಾರ್ದಿಕ್ ಪಟೇಲ್ ಹೆಜ್ಜೆ – ಹಿಮಾಚಲದಲ್ಲಿ ಕಾಂಗ್ರೆಸ್ ಮುನ್ನಡೆ