ಮಾಂಡೌಸ್ ಚಂಡಮಾರುತದ ಅಬ್ಬರ: ತಮಿಳುನಾಡಿನಲ್ಲಿ ಭಾರೀ ಮಳೆ, ಹಲವು ವಿಮಾನಗಳು ರದ್ದು

ಮಾಂಡೌಸ್ ಚಂಡಮಾರುತ ತಮಿಳುನಾಡಿನ ಕರಾವಳಿಗೆ ಸಮೀಪಿಸುತ್ತಿರುವ ಕಾರಣ ತಮಿಳುನಾಡಿನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ.

ಮಾಂಡೌಸ್ ಚಂಡಮಾರುತ (Mondous cyclone) ತಮಿಳುನಾಡಿ (Tamil nadu) ನ ಕರಾವಳಿಗೆ ಸಮೀಪಿಸುತ್ತಿರುವ ಕಾರಣ ತಮಿಳುನಾಡಿನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಾಂಡೌಸ್ ಚಂಡಮಾರುತ ಇಂದು ಮಧ್ಯರಾತ್ರಿ ಕರಾವಳಿಯನ್ನು ದಾಟಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಇಂದು ಬೆಳಗ್ಗೆ ಚೆನ್ನೈ (Chennai) ನ ಹಲವಾರು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆ 6 ರಿಂದ ಮಧ್ಯರಾತ್ರಿಯವರೆಗೆ ಚೆನ್ನೈನಿಂದ ತೆರಳುವ ಹಲವಾರು ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಸಬ್ ಅರ್ಬನ್ ರೈಲು (Sub urban railway) ಸೇವೆಗಳು ಸೇರಿದಂತೆ ಇತರೆ ರೈಲುಗಳು ಕಾರ್ಯನಿರ್ವಹಿಸಲಿವೆ. ಮಳೆ ಹಿನ್ನಲೆಯಲ್ಲಿ ಇಂದು ಮತ್ತು ಶನಿವಾರ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಮಾಂಡೌಸ್ ಚಂಡಮಾರುತ ಹಿನ್ನೆಲೆಯಲ್ಲಿ ಚೆನ್ನೈ, ಚೆಂಗಲ್ಪಟ್ಟು, ವಿಲ್ಲುಪುರಂ, ತಿರುವಳ್ಳೂರು, ವೆಲ್ಲೂರು (Vellore) , ಕಡಲೂರು, ರಾಣಿಪೇಟ್, ಕಾಂಚೀಪುರಂ, ಕಲ್ಲಕುರಿಚಿ, ತಂಜಾವೂರು, ತಿರುವರೂರು, ಮೈಲಾಡುತುರೈ, ನಾಗಪಟ್ಟಣಂ, ಅರಿಯಲೂರ್, ಪೆರಂಬಲೂರು, ಪುದುಮೂರು, ಧರ್ಮಪುರ ಸೇರಿ 19 ಜಿಲ್ಲೆಗಳಲ್ಲಿ ಶುಕ್ರವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದನ್ನು ಓದಿ : –  ಪಕ್ಷದ ಅಧ್ಯಕ್ಷ ಸ್ಥಾನ ನಿಭಾಯಿಸಲು ಡಿಕೆಶಿ ಒದ್ದಾಡುತ್ತಿದ್ದಾರೆ..! ಜಿ.ಪರಮೇಶ್ವರ್ ಅಚ್ಚರಿಯ ಹೇಳಿಕೆ

ಕಾರೈಕಾಲ್‌ ನ ಪೂರ್ವ-ಆಗ್ನೇಯಕ್ಕೆ 350 ಕಿಮೀ ಮತ್ತು ನೈಋತ್ಯ ಬಂಗಾಳ ಕೊಲ್ಲಿಯ ಮೇಲೆ ಚೆನ್ನೈನಿಂದ ಸುಮಾರು 440 ಕಿಮೀ ಆಗ್ನೇಯದಲ್ಲಿ ಕೇಂದ್ರೀಕೃತವಾಗಿರುವ ಚಂಡಮಾರುತವು, ಶುಕ್ರವಾರ ಬೆಳಗಿನವರೆಗೆ ತನ್ನ ತೀವ್ರತೆಯನ್ನು ಕಾಯ್ದುಕೊಂಡು ನಂತರ ಮುಂಜಾನೆ ಚಂಡಮಾರುತವಾಗಿ ದುರ್ಬಲಗೊಳ್ಳುವ ಸಾಧ್ಯತೆಯಿದೆ ಎಂದು ಐಎಂಡಿ ಮಾಹಿತಿ ನೀಡಿದೆ.

ಇದನ್ನು ಓದಿ : – ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮೀ ಅರುಣಾ ಜನಾರ್ದನ ರೆಡ್ಡಿ ರಾಜಕೀಯಕ್ಕೆ..? ಯಾವ ಕ್ಷೇತ್ರ ಗೊತ್ತಾ…?

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!