ವರ್ಷದ ಮೊದಲ ತೌಕ್ತೆ ಚಂಡಮಾರುತ ಮೇ 18ರಂದು ಗುಜರಾತ್ ನ ಪೋರ್ ಬಂದರ್ ಗೆ ಅಪ್ಪಳಿಸಲಿದ್ದು, ಆರಂಭಿಕ ಅಬ್ಬರಕ್ಕೆ ನಾಲ್ವರು ಬಲಿಯಾಗಿದ್ದಾರೆ.
ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ ಚಂಡಮಾರುತ ಗುಜರಾತ್ ಅಲ್ಲದೇ, ಮುಂಬೈ, ಗೋವಾ ಮತ್ತು ಕರ್ನಾಟಕದ ಕರಾವಳಿಗೆ ಅಪ್ಪಳಿಸಲಿದ್ದು, ಭಾರೀ ನಷ್ಟ ಉಂಟು ಮಾಡಲಿದೆ. ಈಗಾಗಲೇ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.
ಕರ್ನಾಟಕದಲ್ಲಿ ಭಾರೀ ಮಳೆಗೆ ನಾಲ್ವರು ಬಲಿಯಾಗಿದ್ದು, 73 ಗ್ರಾಮಗಳಲ್ಲಿ ಸಾಕಷ್ಟು ಹಾನಿ ಮಾಡಿದೆ. ಗೋವಾದಲ್ಲಿ ಭರೀ ಮಳೆಯಾಗುತ್ತಿದ್ದು, ಹಲವು ಕಟ್ಟಡಗಳಿಗೆ ಹಾನಿ ಸಂಭವಿಸಿದ್ದು, ಯಾವುದೇ ಸಾವು-ನೋವು ವರದಿಯಾಗಿಲ್ಲ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.