ಡಿ. 16ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

ಬೆಂಗಳೂರು ( BANGALORE ) ಸೇರಿದಂತೆ ರಾಜ್ಯದ ವಿವಿಧೆಡೆ ಡಿ. 16ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ( BANGALORE ) ಸೇರಿದಂತೆ ರಾಜ್ಯದ ವಿವಿಧೆಡೆ ಡಿ. 16ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿ. 12ರಂದು ಚಾಮರಾಜನಗರ ( CHAMARAJNAGAR ) ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಹೇಳಲಾಗಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Bangalore Rains: Bengaluru, parts of Karnataka to see heavy rains as yellow  warning issued

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ( RAICHURU ) ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ಇದನ್ನು ಓದಿ : –  ಇಂದು ಗುಜರಾತ್‍ನ 18ನೇ ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕಾರ

Moderate to heavy Bengaluru rains to begin by today afternoon | Skymet  Weather Services

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಎಚ್.ಎ.ಎಲ್.ನಲ್ಲಿ 19.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 19.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 18.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮ್ಯಾಂಡಸ್ ಚಂಡಮಾರುತವು ಕಾಫಿನಾಡು ಚಿಕ್ಕಮಗಳೂರಿನಲ್ಲೂ ಸಾಕಷ್ಟು ಮಳೆಯನ್ನು ಸುರಿಸುತ್ತಿದೆ. ದಟ್ಟನೆಯ ಮಂಜು, ಜೋರಾಗಿ ತಣ್ಣನೆಯ ಗಾಳಿ ಬೀಸುತ್ತಿದೆ. ಜಿಟಿ ಜಿಟಿ ಮಳೆಯಿಂದ ಮನೆಯಿಂದ ಹೊರಬರಲಾರದೇ ಜನರು ಪರದಾಡುತ್ತಿದ್ದಾರೆ.

ಇದನ್ನು ಓದಿ : –  ಪಕ್ಷ ಯಾವುದೇ ಸವಾಲು ನೀಡಿದರೂ ನಿಭಾಯಿಸುತ್ತೇನೆ – ಬಿ.ವೈ ವಿಜಯೇಂದ್ರ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!