ಮಧ್ಯಮ ಕ್ರಮಾಂಕದಲ್ಲಿ ಎಬಿ ಡಿವಿಲಿಯರ್ಸ್ ಸಿಡಿಸಿದ ಅರ್ಧಶತಕದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 172 ರನ್ ಗಳ ಗುರಿ ಒಡ್ಡಿದೆ.
ಅಹಮದಾಬಾದ್ ನಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ ಸಿಬಿ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 171 ರನ್ ಗಳಿಸಿತು.
ಒಂದು ಹಂತದಲ್ಲಿ ಆರ್ ಸಿಬಿ 60 ರನ್ ಗೆ 3 ವಿಕೆಟ್ ಕಳೆದುಕೊಂಡು ಕಂಗಾಲಾಗಿತ್ತು. ಆದರೆ ರಜತ್ ಪಟಿಡರ್ ಜೊತೆ 4ನೇ ವಿಕೆಟ್ ಗೆ ಜೊತೆಯಾದ ಎಬಿ ಡಿವಿಲಿಯರ್ಸ್ ತಂಡವನ್ನು ಆಧರಿಸಿ ಮತ್ತೊಮ್ಮೆ ಆಪದ್ಭಾಂದವನ ಪಾತ್ರ ನಿಭಾಯಿಸಿದರು.