ಸಂಘಟಿತ ಪ್ರದರ್ಶನ ನೀಡಿದ ಡೆಲ್ಲಿ ಕ್ಯಾಪಿಟಲ್ಸ್ 33 ರನ್ ಗಳ ಭಾರೀ ಅಂತರದಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಬಗ್ಗುಬಡಿದಿದೆ.
ಅಬುಧಾಬಿಯಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಒಡ್ಡಿದ 155 ರನ್ ಗಳ ಗುರಿ ಬೆಂಬತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 121 ರನ್ ಗಳಿಸಲಷ್ಟೇ ಶಕ್ತವಾಯಿತು.
ರಾಜಸ್ಥಾನ್ ಪರ ಸಂಜು ಸ್ಯಾಮ್ಸನ್ ಏಕಾಂಗಿ ಹೋರಾಟ ನಡೆಸಿ 53 ಎಸೆತಗಳಲ್ಲಿ 8 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 70 ರನ್ ಗಳಿಸಿದರು.
ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಡೆಲ್ಲಿ ತಂಡದ ಆರಂಭಿಕರಾದ ಪೃಥ್ವಿ ಶಾ ಮತ್ತು ಶಿಖರ್ ಧವನ್ ಬೇಗನೇ ನಿರ್ಗಮಿಸಿದ ನಂತರ ಜೊತೆಯಾದ ಮಾಜಿ ನಾಯಕ ಶ್ರೇಯಸ್ ಅಯ್ಯರ್ ಮತ್ತು ಹಾಲಿ ನಾಯಕ ರಿಷಭ್ ಪಂತ್ 3ನೇ ವಿಕೆಟ್ ಗೆ 62 ರನ್ ಪೇರಿಸಿ ತಂಡವನ್ನು ಆಧರಿಸಿದರು. ಆದರೆ ಇವರಿಬ್ಬರು ಔಟಾಗುತ್ತಿದ್ದಂತೆ ತಂಡ ನಾಟಕೀಯ ಕುಸಿತಕ್ಕೆ ಒಳಗಾಯಿತು.
ಶ್ರೇಯಸ್ ಅಯ್ಯರ್ 32 ಎಸೆತಗಳಲ್ಲಿ 1 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 43 ರನ್ ಗಳಿಸಿದರೆ, ರಿಷಭ್ ಪಂತ್ 24 ಎಸೆತಗಳಲ್ಲಿ 2 ಬೌಂಡರಿ ಸೇರಿದ 24 ರನ್ ಬಾರಿಸಿದರೆ, ಶಿಮ್ರಾನ್ ಹೆಟ್ಮೆಯರ್ 16 ಎಸೆತಗಳಲ್ಲಿ 5 ಬೌಂಡರಿ ಒಳಗೊಂಡ 28 ರನ್ ಗಳಿಸಿ ತಂಡದ ಮೊತ್ತ ಉಬ್ಬಿಸುವ ಆತುರದಲ್ಲಿ ವಿಕೆಟ್ ಒಪ್ಪಿಸಿದರು.
ರಾಜಸ್ಥಾನ್ ಪರ ಮುಫ್ತುಫಿಸುರ್ ರೆಹಮಾನ್ ಮತ್ತು ಚೇತನ್ ಸಕಾರಿಯಾ ತಲಾ 2 ವಿಕೆಟ್ ಗಳಿಸಿದರು. ಕಾರ್ತಿಕ್ ತ್ಯಾಗಿ ಮತ್ತು ರಾಹುಲ್ ತವಾಟಿಯಾ ತಲಾ 1 ವಿಕೆಟ್ ಪಡೆದರು.