ಮಾಧ್ಯಮ ಹಾಗೂ ಕೇಬಲ್ ಸಿಬ್ಬಂದಿಗೆ ವ್ಯಾಕ್ಸಿನ್ ಅಭಿಯಾನಕ್ಕೆ ಡಿಸಿಎಂ ಅಶ್ವತ್ಥನಾರಾಯಣ ಚಾಲನೆ

ಬೆಂಗಳೂರು: ಎಲ್ಲ ಬಗೆಯ ಮಾಧ್ಯಮಗಳ ಪ್ರತಿನಿಧಿಗಳು, ಪತ್ರಿಕೆಗಳ ವಿತರಕರು, ಕೇಬಲ್ ಆಪರೇಟರ್ ಗಳು ಸೇರಿ ವಿವಿಧ ವರ್ಗಗಳ ಮುಂಚೂಣಿ ಕಾರ್ಯಕರ್ತರು-ಆದ್ಯತಾ ಗುಂಪಿನ ಜನರಿಗೆ ವ್ಯಾಕ್ಸಿನ್ ನೀಡುವ ಅಭಿಯಾನಕ್ಕೆ ರಾಜ್ಯ ಕೋವಿಡ್  ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಚಾಲನೆ ನೀಡಿದರು.

ನಗರದ ಮಲ್ಲೇಶ್ವರ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಈ ಲಸಿಕೆ ಅಭಿಯಾನಕ್ಕೆ ಶುಕ್ರವಾರ ಚಾಲನೆ ನೀಡಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

“ಈಗಾಗಲೇ ಫ್ರಂಟ್ ಲೈನ್ ಕಾರ್ಯಕರ್ತರಿಗೆ ಅದರಲ್ಲೂ ಮುಖ್ಯವಾಗಿ ಟೆಲಿಕಾಂ, ಇಂಟರ್ನೆಟ್ ಸಂಪರ್ಕ ಕಲ್ಪಿಸುವ ಸಿಬ್ಬಂದಿಯ ಜತೆಗೆ, ಪತ್ರಿಕೆ ಹಾಗೂ ವಿದ್ಯುನ್ಮಾನ ಮಾಧ್ಯಮಗಳ ಸಿಬ್ಬಂದಿಗೆ ಕೇಂದ್ರದ ಮಾರ್ಗಸೂಚಿಯಂತೆ ಈ ಲಸಿಕೆ ಕೊಡಲಾಗುತ್ತಿದೆ ಎಂದರು.

ಇವರೆಲ್ಲರೂ ಜನರ ಸಂಪರ್ಕದಲ್ಲಿ ಹೆಚ್ಚು ಇರುತ್ತಾರೆ. ಹೀಗಾಗಿ ಇವರಿಗೆ ಸೋಂಕಿನ ಅಪಾಯ ಹೆಚ್ಚು. ಆದ್ದರಿಂದ ಆದ್ಯತೆಯ ಮೇಲೆ ಇವರೆಲ್ಲರಿಗೂ ಲಸಿಕೆ ಕೊಡಲಾಗುತ್ತಿದೆ. ರಾಜ್ಯಾದ್ಯಂತ ಈ ಗುಂಪಿಗೆ ಲಸಿಕಾ ಅಭಿಯಾನ ಉತ್ತಮವಾಗಿ ನಡೆಯುತ್ತಿದೆ ಎಂದರು.

ವಿಧಾನ ಪರಿಷತ್​ ಸದಸ್ಯ ರವಿಕುಮಾರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ್ ತಗಡೂರು, ಕೇಬಲ್ ಆಪರೇಟರ್ಸ್ ಸಂಘದ ರಾಮ ಪ್ರಸಾದ್  ಈ ಸಂದರ್ಭದಲ್ಲಿ ಇದ್ದರು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!