ಬೆಳಗಾವಿ : ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿಯವರ ಸಹೋದರನ ಪುತ್ರ ವಿನೋದ ಸವದಿ (36) ಅವರು ಇಂದು ಬೆಳಗಿನ ಜಾವ ಕೋವಿಡ್ ನಿಂದಾಗಿ ಮೃತಪಟ್ಟಿದ್ದಾರೆ.
ಕೆಲವು ದಿನಗಳ ಹಿಂದೆ ಕೋವಿಡ್ ದೃಢಪಟ್ಟಿದ್ದರಿಂದ ಅವರನ್ನು ಬೆಳಗಾವಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಚಿಕಿತ್ಸೆಗೆ ಸ್ಪಂದಿಸದೇ ವಿನೋದ ಸವದಿ ಅವರು ಬುಧವಾರದಂದು ಕೊನೆಯುಸಿರೆಳೆದಿದ್ದಾರೆ.
ವಿನೋದ ಅವರು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಸಹೋದರ ಪರಪ್ಪ ಸವದಿ ಅವರ ಪುತ್ರರಾಗಿದ್ದಾರೆ. ಪರಪ್ಪ ಸವದಿ ಅವರು ಕೃಷ್ಣ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾಗಿದ್ದಾರೆ.