ಭಾರತ್ ಬಂದ್ ಪ್ರಯುಕ್ತ ಬೆಂಗಳೂರಿನಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸ್ ಅಧಿಕಾರಿಯೊಬ್ಬರ ಕಾಲಿನ ಮೇಲೆ ಕಾರು ಹರಿದ ಘಟನೆ ನಡೆದಿದೆ.
ಗೊರಗುಂಟೆ ಪಾಳ್ಯದ ಜಂಕ್ಷನ್ ಬಳಿ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಅವರ ಕಾಲಿನ ಮೇಲೆ ರೈತ ಮುಖಂಡರೊಬ್ಬರ ಕಾರು ಹರಿದಿದ್ದು, ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಪ್ರತಿಭಟನಾ ನಿರತ ರೈತ ಮುಖಂಡರನ್ನು ವಶಕ್ಕೆ ಪಡೆಯುವ ಸಂದರ್ಭದಲ್ಲಿ ಈ ಅತಾಚುರ್ಯ ನಡೆದಿದ್ದು, ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಯಶವಂತಪುರ ಬಳಿಯ ಆರ್ ಎಂಸಿ ವಾರ್ಡ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.