ಕೇಬಲ್ ಸೇತುವೆ ಕುಸಿದು ಸಾವನ್ನಪ್ಪಿದವರ ಸಂಖ್ಯೆ 141ಕ್ಕೆ ಏರಿಕೆ

ಗುಜರಾತ್ನ ( gujurath) ಮೊರ್ಬಿಯದಲ್ಲಿ ಸಂಭವಿಸಿದ ಕೇಬಲ್ ಸೇತುವೆ ಕುಸಿತ ದುರಂತದಲ್ಲಿ ಸಾವು-ನೋವಿನ ಸಂಖ್ಯೆ ಹೆಚ್ಚಾಗುತ್ತಿದ್ದು, ಸದ್ಯ ಮೃತರ ಸಂಖ್ಯೆ 90ರಿಂದ 141ಕ್ಕೆ ಏರಿಕೆಯಾಗಿದೆ. ಇನ್ನೂ ಹಲವರು ನದಿಯಲ್ಲಿ ಸಿಲುಕಿರುವ ಅನುಮಾನ ವ್ಯಕ್ತವಾಗಿದ್ದು, ಇವರ ಶೋಧಕಾರ್ಯ ಹಾಗೂ ರಕ್ಷಣಾ ಕಾರ್ಯ ಮುಂದುವರಿದೆ. ಸ್ಥಳದಲ್ಲಿ ಸೇನೆ, ಎಸ್ಡಿಆರ್ಎಫ್, ಎನ್.ಡಿ.ಆರ್.ಎಫ್ ಬೀಡುಬಿಟ್ಟಿದೆ.

ಏನಿದು ದುರಂತ..?

ಗುಜರಾತ್ ನ ಮೊರ್ಬಿ ಜಿಲ್ಲೆಯ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ತೂಗು ಸೇತುವೆ ಭಾನುವಾರ ಕುಸಿದು ಬಿದ್ದು ದೊಡ್ಡ ದುರಂತ ಸಂಭವಿಸಿದೆ. ಸೇತುವೆ ಮೇಲಿದ್ದ ಹಲವರು ನದಿಗೆ ಬಿದ್ದಿದ್ದಾರೆ. ವರದಿಗಳ ಪ್ರಕಾರ ಗುಜರಾತ್ ಸೇತುವೆ ದುರಂತದಲ್ಲಿ ಈವರೆಗೆ ಬಂದ ಮಾಹಿತಿ ಪ್ರಕಾರ 30 ಮಕ್ಕಳು ಸೇರಿದಂತೆ 90 ಜನರು ಸಾವನ್ನಪ್ಪಿದ್ದರು. ಇದೀಗ ಸಾವಿನ ಸಂಖ್ಯೆ 150ರ ಸಮೀಪ ತಲುಪಿದೆ. ಇದನ್ನೂ ಓದಿ : –  ಇಬ್ಬರು ಮಕ್ಕಳೊಂದಿಗೆ ಚೆಕ್ ಡ್ಯಾಂ ಗೆ ಹಾರಿ ಮಹಿಳೆ ಆತ್ಮಹತ್ಯೆ…!


ಮೋರ್ಬಿಯಲ್ಲಿರುವ ಕೇಬಲ್ ಸೇತುವೆಯು ಐತಿಹಾಸಿಕವಾದದ್ದು. ಕಳೆದ ವಾರ ಅದನ್ನು ನವೀಕರಿಸಲಾಗಿತ್ತು. ನವೀಕರಣದ ನಂತರ, ಅಕ್ಟೋಬರ್ 26 ರಂದು ಗುಜರಾತಿ ಹೊಸ ವರ್ಷದ ದಿನದಂದು ಅದನ್ನು ಸಾರ್ವಜನಿಕರ ಉಪಯೋಗಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಅಕ್ಟೋಬರ್ 30ರಂದು ಸಂಜೆ ಛಾತ್ ಪೂಜೆಯ ನಿಮಿತ್ತ ಕೆಲವು ವಿಧಿವಿಧಾನಗಳನ್ನು ನೆರವೇರಿಸಲು ಸೇತುವೆ ಮೇಲೆ ಬಹಳಷ್ಟು ಜನರು ಜಮಾಯಿಸಿದ್ದರು. ಕುಸಿದಾಗ ಸೇತುವೆ ಮೇಲೆ ಸುಮಾರು 500 ಜನರು ಇದ್ದರು ಎನ್ನಲಾಗಿದ್ದು, ಭಾರ ಹೆಚ್ಚಾಗಿದ್ದಕ್ಕೆ ಸೇತುವೆ ಕುಸಿದಿದೆ ಎಂದು ತಿಳಿದುಬಂದಿದೆ. ಅದಾಗ್ಯೂ ಘಟನೆಗೆ ನಿಖರ ಕಾರಣ ತಿಳಿಯಲು ತನಿಖೆಗೆ ಆದೇಶಿಸಲಾಗಿದೆ.

ಇದನ್ನೂ ಓದಿ : –   ನಟಿ ಸಮಂತಾಗೆ ನೀವು ಈ ಸವಾಲನ್ನೂ ಜಯಿಸುತ್ತೀರಿ ಎಂದ ಮೆಗಾಸ್ಟಾರ್, ಸಾಯಿಪಲ್ಲವಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!