ಬ್ಯಾಡ್ಮಿಂಟನ್ ದಂತಕತೆ ಪ್ರಕಾಶ್ ಪಡುಕೋಣೆ ಮತ್ತು ಪುತ್ರಿ ಹಾಗೂ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ.
ತಂದೆ ಪ್ರಕಾಶ್ ಪಡುಕೋಣೆಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ ದೀಪಿಕಾ ಪಡುಕೋಣೆಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇದರ ಬೆನ್ನಲ್ಲೇ ತಾಯಿ ಉಜಾಲಾ ಮತ್ತು ಸೋದರಿ ಅನಿಶಾ ಅವರಲ್ಲೂ ಕೊರೊನಾ ಲಕ್ಷಣಗಳು ಕಂಡು ಬಂದಿದೆ.
ಲಾಕ್ಡೌನ್ ಪ್ರಾರಂಭವಾಗುವ ಮೊದಲೇ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಕುಟುಂಬದೊಂದಿಗೆ ಸ್ವಲ್ಪ ಸಮಯ ಕಳೆಯಲು ಕಳೆದ ತಿಂಗಳು ಬೆಂಗಳೂರಿಗೆ ಬಂದಿದ್ದು, ದೀಪಿಕಾ ಕುಟುಂಬದ ಸದಸ್ಯರೊಂದಿಗೆ ಇದ್ದಾರೆ.
ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲ ದಿನಗಳ ಹಿಂದೆ ಪ್ರಕಾಶ್ ಪಡುಕೋಣೆ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ವಾರ ಕಳೆದರೂ ಜ್ವರ ಕಡಿಮೆ ಆಗದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಪರೀಕ್ಷಿಸಿದಾಗ ಕೊರೊನಾ ಪಾಸಿಟಿವ್ ಬಂದಿದೆ.
ಪ್ರಕಾಶ್ ಪಡುಕೋಣೆ ಅವರ ಪತ್ನಿ ಉಜ್ವಲ ಹಾಗೂ ಎರಡನೇ ಪುತ್ರಿಗೂ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದು ಪರೀಕ್ಷೆಗೆ ಒಳಪಡಿಸಿದಾಗ ಪಾಸಿಟಿವ್ ಬಂದಿದೆ. ಅವರು ಮನೆಯಲ್ಲೇ ಐಸೋಲೆಟ್ ಆಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.