ದೆಹಲಿಯಲ್ಲಿ ಅಗ್ನಿ ಅವಘಡ : ಬೆಂಕಿಯಲ್ಲಿ ಬೆಂದ 80 ಕ್ಕೂ ಅಧಿಕ ಮನೆಗಳು

ನವದೆಹಲಿ : ಅಗ್ನಿ ಅವಘಡದಿಂದ 80 ಕ್ಕೂ ಅಧಿಕ ಮನೆಗಳು ಸುಟ್ಟು ಕರಕಲಾಗಿರುವ ಘಟನೆ ಬೆಳ್ಳಂಬೆಳಗ್ಗೆ ದೆಹಲಿಯ ಓಖ್ಲಾ ಪ್ರದೇಶದ ಸಂಜಯ್ ಕಾಲೋನಿಯಲ್ಲಿ ನಡೆದಿದೆ.
ತಡರಾತ್ರಿ 2 ಗಂಟೆ ವೇಳೆಗೆ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯ ನಿವಾಸಿಗಳು ಅಗ್ನಿ ಶಾಮಕದಳಕ್ಕೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ 30 ಕ್ಕೂ ಅಧಿಕ ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸಲಾಗಿದ್ದು, ಸುಮಾರು 80 ಕ್ಕೂ ಹೆಚ್ಚು ಮನೆಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಹೋಗಿವೆ. ಕಾರ್ಖಾನೆ ಪಕ್ಕದಲ್ಲಿದ್ದ 40ಕ್ಕೂ ಹೆಚ್ಚು ಜನರನ್ನ ರಕ್ಷಣೆ ಮಾಡಲಾಗಿದೆ.
ಲಕ್ಷಾಂತರ ಮೌಲ್ಯದ ಆಸ್ತಿ ನಾಶವಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿ ತಿಳಿಸಿದರು. ಅಗ್ನಿ ಶಾಮಕದಳ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸುತ್ತಿದ್ದು, ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಿದ್ದಾರೆ.