ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ವಿರುದ್ದ ಪ್ರಕರಣ ದಾಖಲು

ನವದೆಹಲಿ: ಭಾರತದಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿ ಟ್ವೀಟ್ ಮಾಡಿರುವ ಜಾಗತಿಕ ಹವಾಮಾನ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಅವರ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಈ ಟ್ವೀಟ್ ಕ್ರಿಮಿನಲ್ ಪಿತೂರಿ ಮತ್ತು ದ್ವೇಷವನ್ನು ಉತ್ತೇಜಿಸುತ್ತದೆ ಎಂದು ಆರೋಪಿಸಲಾಗಿದೆ.ಕೃಷಿ ಕಾನೂನುಗಳ ವಿರುದ್ಧ ದೆಹಲಿ ಬಳಿ ನಡೆದ ಪ್ರತಿಭಟನೆಯನ್ನು ಬೆಂಬಲಿಸುವ ಗ್ರೆಟಾ ಥನ್‌ಬರ್ಗ್ ಅವರ ಟ್ವೀಟ್‌ಗಳು ರೈತರ ಆಂದೋಲನವನ್ನು ಅಂತರರಾಷ್ಟ್ರೀಯ ಗಮನ ಸೆಳೆಯುವಂತೆ ಮಾಡಿವೆ.
ಈಗ ಅವರ ಮೇಲೆ ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆಯ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುತ್ತದೆ ಎಂದು ಆರೋಪಿಸಲಾಗಿದೆ. ಅಮೆರಿಕದ ಖ್ಯಾತ ಪಾಪ್ ಗಾಯಕಿ ರಿಹಾನ್ನಾ ಸಹ ಭಾರತದ ರೈತರ ಹೋರಾಟದ ಬಗ್ಗೆ ಟ್ವೀಟ್ ಮೂಲಕ ವಿಶ್ವದ ಗಮನ ಸೆಳೆದಿದ್ದರು.