ನವದೆಹಲಿ: ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಶಾಲೆಗಳ ಎಲ್ಲಾ ತರಗತಿಗಳನ್ನು ಬಂದ್ ಮಾಡುವಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆದೇಶಿಸಿದ್ದಾರೆ.
ನವದೆಹಲಿಯಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಿದ ಮೂರು ದಿನಗಳ ನಂತರದಲ್ಲಿ ಶಾಲೆಗಳನ್ನು ಬಂದ್ ಮಾಡುವಂತೆ ಆದೇಶ ಹೊರಡಿಸಲಾಗಿದೆ. ಈಗಾಗಲೇ ದೆಹಲಿಯಲ್ಲಿ ಏಪ್ರಿಲ್ 30ರವರೆಗೂ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆವರೆಗೂ ಕರ್ಫ್ಯೂ ಜಾರಿಗೊಳಿಸಲಾಗಿದೆ.
ನವದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 7437 ಮಂದಿಗೆ ಕೊರೋನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಮಹಾಮಾರಿಗೆ ಈವರೆಗೂ 11,157 ಮಂದಿ ಪ್ರಾಣ ಬಿಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.