ಭಾರೀ ಆತಂಕ ಸೃಷ್ಟಿಸಿದ್ದ ಡೆಲ್ಟಾ ಪ್ಲಸ್ ವೈರಸ್ ದೇಶಾದ್ಯಂತ ಕೇವಲ 86 ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರಕಾರ ತಿಳಿಸಿದೆ.
ಜಗತ್ತಿನಾದ್ಯಂತ ಭಾರೀ ಪ್ರಮಾಣದಲ್ಲಿ ಪ್ರಾಣಹಾನಿಗೆ ಕಾರಣವಾಗಿರುವ ಭಾರತದ ಕೊರೊನಾ ರೂಪಾಂತರಿ ಡೆಲ್ಟಾ ಪ್ಲಸ್ ವೈರಸ್ ಭಾರತದಲ್ಲಿ ಹೆಚ್ಚು ಪರಿಣಾಮ ಬೀರಿಲ್ಲ ಎಂದು ಕೇಂದ್ರ ಎನ್ ಸಿಡಿಸಿ ನಿರ್ದೇಶಕ ಡಾ.ಎಸ್.ಕೆ. ಸಿಂಗ್ ತಿಳಿಸಿದ್ದಾರೆ.
37 ಜಿಲ್ಲೆಗಳಲ್ಲಿ ಕೊರೊನಾ ವೈರಸ್ ಪ್ರಮಾಣದಲ್ಲಿ ಹೆಚ್ಚಳ ಕಂಡು ಬಂದಿದೆ. ಕೇರಳ ಸೇರಿದಂತೆ 11 ರಾಜ್ಯಗಳಲ್ಲಿ ಮುನ್ನೆಚ್ಚರಿಕೆ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.