ಮೈಸೂರಿನಲ್ಲಿ ರಾಜ್ಯದ ಮೊದಲ ಕೊರೊನಾ ಡೆಲ್ಟಾ ಪ್ಲಸ್ ಸೋಂಕು ದೃಢಪಟ್ಟಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಸುಧಾಕರ್ ದೃಢಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನ ವ್ಯಕ್ತಿಯೊಬ್ಬರಲ್ಲಿ ಕೊರೊನಾ ಸೋಂಕಿನ ರೂಪಾಂತರಿ ಡೆಲ್ಟಾ ಪ್ಲಸ್ ಸೋಂಕು ದೃಢಪಟ್ಟಿದ್ದು, ಇದು ರಾಜ್ಯದಲ್ಲಿ ಪತ್ತೆಯಾದ ಮೊದಲ ಪ್ರಕರಣವಾಗಿದೆ ಎಂದಿದ್ದಾರೆ.
ಮೈಸೂರಿನಲ್ಲಿ ಡೆಲ್ಟಾ ಪ್ಲಸ್ ಸೋಂಕಿತ ವ್ಯಕ್ತಿಯಿಂದ ಮತ್ತೊಬ್ಬರಿಗೆ ಹರಡಿಲ್ಲ. ಅಲ್ಲದೇ ಅವರಲ್ಲಿ ಯಾವುದೇ ಸೋಂಕಿನ ಲಕ್ಷಣ ಕಂಡು ಬಂದಿಲ್ಲ ಎಂಬುದು ತಿಳಿದು ಬಂದಿದ್ದು, ಈ ಬಗ್ಗೆ ಸೂಕ್ಷ್ಮವಾಗಿ ಗಮನ ಹರಿಸಲಾಗಿದೆ ಎಂದು ಅವರು ಹೇಳಿದರು.