ಆಧುನಿಕ ಅವಳಿ ನಗರಗಳಾಗಿ ರಾಮನಗರ- ಚನ್ನಪಟ್ಟಣ ಅಭಿವೃದ್ಧಿ : ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು: ರಾಜಧಾನಿ ಬೆಂಗಳೂರು ಹಾಗೂ ಆರಮನೆ ನಗರಿ ಮೈಸೂರು ಮಾರ್ಗದ ಆಯಕಟ್ಟಿನ ಜಾಗದಲ್ಲಿರುವ ರಾಮನಗರ ಮತ್ತು ಚನ್ನಪಟ್ಟಣಗಳನ್ನು ಅತ್ಯಾಧುನಿಕ ಸೌಲಭ್ಯಗಳುಳ್ಳ ಆಧುನಿಕ ಅವಳಿ ನಗರಗಳನ್ನಾಗಿ ಅಭಿವೃದ್ಧಿಪಡಿಸಲು ಸರಕಾರ ಮುಂದಾಗಿದೆ. ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಇಂದು ಬೆಂಗಳೂರಿನಲ್ಲಿ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜತೆ ಮಾತುಕತೆ ನಡೆಸಿದರು.

ಬೆಂಗಳೂರು ಅಭಿವೃದ್ಧಿಯ ಮಾದರಿಯನ್ನು ಇಟ್ಟುಕೊಂಡು ಇವೆರಡೂ ಪಟ್ಟಣಗಳನ್ನು ಅಭಿವೃದ್ಧಿಪಡಿಸುವುದು ಸರಕಾರದ ಉದ್ದೇಶವಾಗಿದೆ. ಅತ್ಯುತ್ತಮ ಮೂಲಸೌಕರ್ಯ, ಒಳಚರಂಡಿ ಹಾಗೂ ಕುಡಿಯುವ ನೀರು ಸರಬರಾಜು ವ್ಯವಸ್ಥೆ, ಆಕರ್ಷಕ ವಿಶಾಲ ಉದ್ಯಾನವನಗಳ ನಿರ್ಮಾಣ, ಎಲ್ಲ ರಸ್ತೆಗಳು ಇತಿಹಾಸ ದಾಖಲಿಸಿವುದು, ಕ್ರೀಡಾಂಗಣಗಳ ನಿರ್ಮಾಣ ಸೇರಿದಂತೆ ಅಗತ್ಯವಾದ ಎಲ್ಲ ಕೆಲಸಗಳನ್ನು ಕಾಲಮಿತಿಯೊಳಗೆ ಕೈಗೊಂಡು ಮುಗಿಸುವ ಬಗ್ಗೆ ಡಿಸಿಎಂ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು.

ಸಭೆಯ ನಂತರ ಈ ಬಗ್ಗೆ ಮಾಹಿತಿ ನೀಡಿದ ಡಿಸಿಎಂ ಅವರು; ಈಗಾಗಲೇ ಸಮಗ್ರ ಅಭಿವೃದ್ಧಿ ಯೋಜನಾ ವರದಿ ಸಿದ್ಧಪಡಿಸಲು 37 ಲಕ್ಷ ರೂ. ಕೊಡಲಾಗಿದೆ.  ಆರೇಳು ತಿಂಗಳಲ್ಲಿ ಈ ಕೆಲಸ ಆಗಲಿದೆ. ಈ ಮೂಲಕ ಸುಸಜ್ಜಿತ ನಗರಗಳ ನಿರ್ಮಾಣಕ್ಕೆ ನಾಂದಿ ಹಾಡಲಿದ್ದೇವೆ ಎಂದರು.

ಪ್ರಾಧಿಕಾರಗಳಿಗೆ ಇನ್ನಷ್ಟು ಶಕ್ತಿ:

ರಾಮನಗರ ಮತ್ತು ಚನ್ನಪಟ್ಟಣ ಅಭಿವೃದ್ಧಿ ಪ್ರಾಧಿಕಾರಗಳಿಗೆ ಇನ್ನಷ್ಟು ಶಕ್ತಿ ತುಂಬಲಾಗುವುದು. ಎರಡೂ ಪಟ್ಟಣಗಳ ಆಮೂಲಾಗ್ರ ಅಭಿವೃದ್ಧಿಗೆ ಏನೆಲ್ಲ ಅಗತ್ಯವೋ ಎಲ್ಲವನ್ನೂ ಸರಕಾರ ಒದಗಿಸುತ್ತಿದೆ ಎಂದ ಅವರು, ಚನ್ನಪಟ್ಟಣದಲ್ಲಿ ಇನ್ನೊಂದು ಬಸ್‌ ನಿಲ್ದಾಣದ ಅಗತ್ಯವಿದೆ ಎಂಬ ಬೇಡಿಕೆ ಬಂದಿದೆ. ಅದನ್ನೂ ತ್ವರಿತವಾಗಿ ಕಾರ್ಯಗತ ಮಾಡಲಾಗುವುದು ಎಂದರು.

ಮುಖ್ಯವಾಗಿ, ಎರಡೂ ಕಡೆ ಒಳಚರಂಡಿ ವ್ಯವಸ್ಥೆಯನ್ನು ಸಂಪೂರ್ಣವಾಗಿ ಜಾರಿ ಮಾಡಲಾಗುವುದು. ಬೆಂಗಳೂರು ಮಾದರಿಯಲ್ಲಿ ಒಳಚರಂಡಿ ವ್ಯವಸ್ಥೆ ಮಾಡಲಾಗುವುದು. ಇನ್ನು, ನದಿ ಮೂಲಗಳಿಂದ ರಾಮನಗರ-ಚನ್ನಪಟ್ಟಣ ಮಾತ್ರವಲ್ಲದೆ ಇಡೀ ಜಿಲ್ಲೆಯ ಎಲ್ಲ ಗ್ರಾಮಗಳ ಎಲ್ಲ ಮನೆಗಳಿಗೂ ಪೈಪುಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!